8ನೇ ಬಾರಿ ಫೈನಲ್ ಪ್ರವೇಶಿಸಿದ ಸಿಎಸ್ ಕೆ

ಐಪಿಎಲ್ 12 ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಚೆನ್ನೈ ಬೌಲರ್ ಗಳ ದಾಳಿಗೆ ತತ್ತರಿಸಿದ ಕೇವಲ 147 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಮೂಲಕ ಗೆಲುವಿಗೆ ಸುಲಭ ಟಾರ್ಗೆಟ್ ನ್ನು ಪಡೆದ ಧೋನಿ ಪಡೆ ಕೇವಲ 4ವಿಕೆಟ್ ಕಳೆದುಕೊಂಡು 6 ಎಸೆತಗಳು ಬಾಕಿ ಇರುವಂತೆಯೆ ಗೆಲುವಿನ ನಗೆ ಬೀರಿತು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ನೇ ಬಾರಿಗೆ ಐಪಿಎಲ್ ನಲ್ಲಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿತು. ಇನ್ನು, ಫೈನಲ್ ನಲ್ಲಿ ಧೋನಿ ಪಡೆ ಮುಂಬೈ ಇಂಡಿಯನ್ಸ್ ತಂಡದ ಜೊತೆ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿದೆ.

Leave a Reply

Your email address will not be published. Required fields are marked *