ಭಾರತಕ್ಕೆ ವಿಜಯ್ ಮಲ್ಯ ಗಡಿಪಾರು ಮಾಡುವಂತೆ ಲಂಡನ್ ಹೈಕೋರ್ಟ್ ಸೂಚನೆ

ಉದ್ಯಮಿ ವಿಜಯ ಮಲ್ಯ ಗಡಿಪಾರು ಆದೇಶದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂಗ್ಲೆಂಡ್‌ ಹೈಕೋರ್ಟ್ ವಜಾಗೊಳಿಸಿದೆ. ಭಾರತೀಯ ಬ್ಯಾಂಕ್‌ಗಳಿಗೆ 9 ಸಾವಿರ ಕೋಟಿ ಪಂಗನಾಮ ಹಾಕಿ ಎಸ್ಕೇಪ್‌ ಆಗಿರೋ ಮದ್ಯದ ದೊರೆಗೆ ಕೋರ್ಟ್‌ ಶಾಕ್ ನೀಡಿದೆ.

ಕಳೆದ ವರ್ಷ ಡಿಸೆಂಬರ್ ನಲ್ಲಿ ವಿಜಯ್ ಮಲ್ಯ ಗಡಿಪಾರು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ಲಂಡನ್ ವೆಸ್ಟ್ ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್, ಹಣಕಾಸಿನ ವಿಚಾರದಲ್ಲಿ ಹಾಗೂ ವಂಚನೆಗೆ ಸಂಬಂಧಪಟ್ಟಂತೆ ಮಲ್ಯ ವಿರುದ್ಧದ ಆರೋಪಗಳಿಗೆ ಸಾಕ್ಷ್ಯಗಳಿವೆ ಎಂದು ಹೇಳಿ, ಗಡಿಪಾರು ಮಾಡಲು ಆದೇಶ ನೀಡಿತ್ತು. ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಪ್ರಶ್ನಿಸಿ ಮಲ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ನಲ್ಲೂ ಮದ್ಯದ ದೊರೆಗೆ ಹಿನ್ನಡೆಯಾಗಿದ್ದು, ಶೀಘ್ರದಲ್ಲೇ ಭಾರತಕ್ಕೆ ಗಡಿಪಾರು ಮಾಡುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *