ಡಿಕೆಶಿಗೆ ತಿಹಾರ್ ಜೈಲಿನಿಂದ ಸಿಗುತ್ತಾ ಮುಕ್ತಿ…?

ದೆಹಲಿ: ಡಿ.ಕೆ.ಶಿವುಕುಮಾರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಹೈಕೋರ್ಟ್‍ನ ನ್ಯಾ.ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕ ಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಲಿದೆ.

ಅಕ್ರಮ ಹಣ ವರ್ಗಾವಣೆ ಬೇನಾಮಿ ಆಸ್ತಿ ಗಳಿಕೆ ಆರೋಪ ಹೊತ್ತು ನ್ಯಾಯಾಂಗ ಬಂಧನದಡಿ ತಿಹಾರ್ ಜೈಲ್ ಸೇರಿರುವ ಮಾಜಿ ಸಚಿವ ಶಾಸಕ ಡಿ.ಕೆ ಶಿವಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ.

ಈ ಹಿಂದೆ ವಿಚಾರಣೆ ನಡೆಸಿದ್ದ ಪೀಠ ದಸರಾ ಹಬ್ಬದ ಹಿನ್ನೆಲೆ ವಿಚಾರಣೆ ಮುಂದೂಡಲಾಗಿತ್ತು. ಇಂದು ಇಡಿ ವಿಶೇಷ ನ್ಯಾಯಲಯ ಜಾಮೀನು ರದ್ದು ಮಾಡಿದ್ದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ಸುಧೀರ್ಘ ವಿಚಾರಣೆ ಆಲಿಸಲಿದೆ.

Leave a Reply

Your email address will not be published. Required fields are marked *