ಇಂದು ಐಪಿಎಲ್ 2ನೇ ಕ್ವಾಲಿಫೈಯರ್ ಪಂದ್ಯ : ಸಿಎಸ್ ಕೆ-ಡೆಲ್ಲಿ ಫೈಟ್

ಐಪಿಎಲ್ 12 ನೇ ಆವೃತ್ತಿಯ ಚಾಂಪಿಯನ್ ಪಟ್ಟಕ್ಕೆರುವ ತಂಡ ಯಾವುದು ಎಂಬ ಲೆಕ್ಕಾಚಾರದಲ್ಲಿ ಅಭಿಮಾನಿಗಳಿದ್ರೆ, ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸಿ ಚಾಂಪಿಯನ್ ಪಟ್ಟಕ್ಕೇರುವ ವಿಶ್ವಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವಿದೆ. ಹೀಗಾಗಿ ಇಂದು ವಿಶಾಖಪಟ್ಟಣದಲ್ಲಿ ಐಪಿಎಲ್ ನ 2 ನೇ ಕ್ಯಾಲಿಫೈಯರ್ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಜೊತೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೆಣಸಾಡಲಿದೆ. ಉಭಯ ತಂಡಗಳು ಬಲಿಷ್ಠವಾಗಿದ್ದು ಸ್ಟಾರ್ ಆಟಗಾರರ ಮೇಲೆ ಎಲ್ಲರ ದೃಷ್ಠಿ ನೆಟ್ಟಿದೆ. ಗೆದ್ದ ತಂಡ ಮುಂಬೈ ಇಂಡಿಯನ್ಸ್ ಜೊತೆ ಫೈನಲ್ ನಲ್ಲಿ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಲಿದೆ.

Leave a Reply

Your email address will not be published. Required fields are marked *