ಚೊಚ್ಚಲ ವಿಶ್ವಕಪ್ ಎತ್ತಿಹಿಡಿದ ಕ್ರಿಕೆಟ್ ಜನಕರು

ಲಾರ್ಡ್ಸ್ : 12ನೇ ಐಸಿಸಿ ಏಕದಿನ ವಿಶ್ವಕಪ್ ನ ಕಿರೀಟವನ್ನು ಇಂಗ್ಲೆಂಡ್ ತಂಡ ಮುಡಿಗೇರಿಸಿಕೊಂಡಿದೆ. ಲಾರ್ಡ್ಸ್ ನಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ರೋಚಕ ಗೆಲುವು ದಾಖಲಿಸುವ ಮೂಲಕ ಕ್ರಿಕೆಟ್ ಜನಕರು 44 ವರ್ಷಗಳ ಬಳಿಕ ವಿಶ್ವಕಪ್ ಗೆದ್ದು ಇತಿಹಾಸ ಸೃಷ್ಠಿಸಿದ್ದಾರೆ.   

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 241 ರನ್ ಗಳ ಸಾಧಾರಣ ಮೊತ್ತವನ್ನು ಗಳಿಸಿತು. ಗೆಲುವಿಗೆ ಸುಲಭ ಟಾರ್ಗೆಟ್ ಪಡೆದ ಆಂಗ್ಲರು ಪಂದ್ಯವನ್ನು ಸುಲಭವಾಗಿ ಗೆಲ್ಲುತ್ತಾರೆ ಅಂತಾ ಕ್ರಿಕೆಟ್ ಅಭಿಮಾನಿಗಳು ಲೆಕ್ಕಾಚಾರವನ್ನು ಹಾಕಿಕೊಂಡಿದ್ರು.

ಆದರೆ, ಕಿವೀಸ್ ಬೊಂಬಾಟ್ ಬೌಲಿಂಗ್ ದಾಳಿಗೆ ತತ್ತರಿಸಿದ ಆಂಗ್ಲರು ಪಂದ್ಯವನ್ನು ಟೈ ಮಾಡಿಕೊಂಡರು. ಬಳಿಕ ಸೂಪರ್ ಓವರ್ ಗೆ ಹೋದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಒಂದು ಓವರ್ ನಲ್ಲಿ 15 ರನ್ ಕಲೆಹಾಕಿತು. ಬಳಿಕ ಬ್ಯಾಟಿಂಗ್ ನಡೆಸಿದ ಕಿವೀಸ್ ಕೂಡ 15 ರನ್ ಕಲೆಹಾಕಿದ ಪರಿಣಾಮ ಪಂದ್ಯ ಮತ್ತೆ ಟೈ ಆಯಿತು.

ಆದ್ರೆ, ಹೆಚ್ಚು ಬೌಂಡರಿಗಳನ್ನು ಸಿಡಿಸಿದ ಆಧಾರದ ಇಂಗ್ಲೆಂಡ್ ತಂಡ ಗೆಲುವು ದಾಖಲಿಸಿ ಚೊಚ್ಚಲ ವಿಶ್ವಕಪ್ ಎತ್ತಿಹಿಡಿದು ಸಂಭ್ರಮಿಸಿತು. ಸರಣಿಯಲ್ಲಿ ಶ್ರೇಷ್ಠ ಪ್ರಶಸ್ತಿಯನ್ನು ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಪಡೆದ್ರೆ, ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಬೆನ್ ಸ್ಟೋಕ್ಸ್ ಪಡೆದು ಮಿಂಚಿದ್ರು.

Leave a Reply

Your email address will not be published. Required fields are marked *