ಗೃಹ ಸಚಿವರಾಗಿ ಅಧಿಕಾರಿ ಸ್ವೀಕರಿಸಿದ ಚಾಣಕ್ಯ ಅಮಿತ್ ಶಾ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸಂಪುಟ ಸೇರಿರುವ ರಾಜಕೀಯ ಚಾಣಕ್ಯ ಅಮಿತ್ ಶಾ ಇಂದು ಗೃಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೊನ್ನೆಯಷ್ಟೇ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಶಾ ಪ್ರಮಾಣ ವಚನ ಸ್ವೀಕರಿಸಿದ್ದರು.

ಇಂದು ಸಂಸತ್ ನ ಉತ್ತರ ಬ್ಲಾಕ್ ನಲ್ಲಿರುವ ಕೊಠಡಿಗೆ ತೆರಳಿದ ಶಾ ಅವರನ್ನು ಕೇಂದ್ರ ಗೃಹ ಖಾತೆಯ ಕಾರ್ಯದರ್ಶಿ ರಾಜೀವ್ ಗೌಬಾ ಮತ್ತು ಇತರ ಅಧಿಕಾರಿಗಳು ಸ್ವಾಗತಿಸಿದರು. ರಾಜ್ ನಾಥ್ ಸಿಂಗ್ ಅವರ ಕೈಯಲ್ಲಿದ್ದ ಗೃಹ ಸಚಿವಾಲಯದ ಅಧಿಕಾರ ಇದೀಗ ಶಾ ಅವರಿಗೆ ಹಸ್ತಾಂತರವಾಗಿದ್ದು, ಸದ್ಯ ಕ್ಯಾಬಿನೆಟ್ ನಲ್ಲಿ ರಾಜನಾಥ್ ಸಿಂಗ್ ರಕ್ಷಣಾ ಸಚಿವರಾಗಿದ್ದಾರೆ.

Leave a Reply

Your email address will not be published. Required fields are marked *