ಜೂ. 27 ರಂದು ಕೊಪ್ಪಳದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಕೊಪ್ಪಳ : ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡರವರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜೂನ್. 27 ರಂದು ಬೆಳಿಗ್ಗೆ 10-30 ಕ್ಕೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಲಾಗಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಈ. ತುಕಾರಾಂ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಅಧ್ಯಕ್ಷ ಹೆಚ್.ವಿಶ್ವನಾಥರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ್, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್ ಹಾಗೂ ಬಸವರಾಜ ದಡೇಸೂಗೂರು, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಶರಣಪ್ಪ ಮಟ್ಟೂರ ಹಾಗೂ ಡಾ. ಚಂದ್ರಶೇಖರ ಬಿ.ಪಾಟೀಲ, ಜಿ.ಪಂ.ಉಪಾಧ್ಯಕ್ಷೆ ರತ್ನವ್ವ ಭರಮಪ್ಪ, ತಾ.ಪಂ.ಅಧ್ಯಕ್ಷ ಬಾಲಚಂದ್ರನ್, ವಿಶೇಷ ಆಹ್ವಾನಿತರಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್ ಭಾಗವಹಿಸುವರು. ಕೊಪ್ಪಳದ ಹಿರಿಯ ಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು ಅವರು ನಾಡಪ್ರಭು ಕೆಂಪೇಗೌಡರವರ ಕುರಿತು ವಿಶೇಷ ಉಪನ್ಯಾಸವನ್ನು ನೀಡುವರು ಎಂದು ಪ್ರಕಟಣೆ ತಿಳಿಸಿದೆ.  

Leave a Reply

Your email address will not be published. Required fields are marked *