ಮುಂಗಾರು ಕೈ ಕೊಡುವ ಸೂಚನೆ : ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಈ ಬಾರಿ ರಾಜ್ಯದಲ್ಲಿ ಮುಂಗಾರು ಕೈ ಕೊಡುವ ಮುನ್ಸೂಚನೆ ಇದ್ದು, ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿ ಮುಂಗಾರು ಕೈ ಕೊಡುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಮೋಡ ಬಿತ್ತನೆ ಮಾಡುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಬಾರಿ ಎರಡು ವರ್ಷದ ಅವಧಿಗೆ ಮೋಡ ಬಿತ್ತನೆ ನಡೆಯಲಿದ್ದು, ಸುಮಾರು 88 ಕೋಟಿ ರೂ. ವೆಚ್ಚದಲ್ಲಿ ಮೋಡ ಬಿತ್ತನೆಗೆ ನಿರ್ಧಾರ ಮಾಡಿದ್ದೇವೆ ಎಂದರು.

ರಾಜ್ಯಾದ್ಯಂತ ಮೋಡ ಬಿತ್ತನೆ ಮಾಡಲಿದ್ದು, ಹುಬ್ಬಳ್ಳಿ ಮತ್ತು ಬೆಂಗಳೂರಿನಲ್ಲಿ ಎರಡು ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಎರಡು ವಿಮಾನಗಳಲ್ಲಿ ಈ ಬಾರಿ ಮೋಡ ಬಿತ್ತನೆ ಮಾಡಲಾಗುತ್ತದೆ. ತಜ್ಞರ ಸಮಿತಿ ಕೂಡ ಮೋಡ ಬಿತ್ತನೆ ಅವಶ್ಯಕತೆ ಇದೆ ಎಂದು ತಿಳಿಸಿದೆ ಎಂದರು.

Leave a Reply

Your email address will not be published. Required fields are marked *