ನಾಳೆಯಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಶುರು

ಬೆಂಗಳೂರು : ಜೂ.12 ರಿಂದ ಪ್ರಸಕ್ತ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಜೂ.19 ರ ವರೆಗೆ ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಅರ್ಜಿ ಸಲ್ಲಿಸಿ ಆನ್ ಲೈನ್ ನಲ್ಲಿ ಅರ್ಜಿ ಸ್ವೀಕೃತಿ ಪಡೆಯಬಹುದಾಗಿದೆ.

ಅರ್ಜಿ ಸ್ವೀಕೃತಿಯನ್ನು ಜೂ.20 ರೊಳಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಬೇಕಾಗಿದ್ದು, ಅರ್ಜಿಗಳ ಪರಿಶೀಲನೆ ಮತ್ತು ಅನುಮೋದನೆ ಅದೇ ದಿನ ನಡೆಯಲಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಮುಂದಿನ ಕ್ರಮಕ್ಕಾಗಿ ಜೂ.22 ರೊಳಗೆ ಪ್ರಾಧಿಕಾರಕ್ಕೆ ಅರ್ಜಿಗಳನ್ನು ಸಲ್ಲಿಸಬೇಕು. 3 ವರ್ಷ ಪೂರೈಸಿದ ಸಿಆರ್ ಪಿ, ಬಿಆರ್ ಪಿ ಶಿಕ್ಷಣ ಸಂಯೋಜಕರು ಅರ್ಜಿ ಸಲ್ಲಿಸುವ ಪ್ರಕ್ರಿಯೆ 12 ರಿಂದ 14 ರವರೆಗೆ ನಡೆಯಲಿದ್ದು, ಅವರಿಗೆ 15 ರಂದು ಕೌನ್ಸೆಲಿಂಗ್ ನಡೆಯಲಿದೆ. ಜು.12 ರಿಂದ 22 ರ ವರೆಗೆ ಕಡ್ಡಾಯ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ.

Leave a Reply

Your email address will not be published. Required fields are marked *