ರಾಜಕೀಯದಲ್ಲೂ ಹೊಸ ಇನ್ನಿಂಗ್ಸ್ ಆರಂಭಿಸಿದ ಗೌತಿ

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಮೇಲೆ ರಾಜಕೀಯದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಮೊದಲ ಪ್ರಯತ್ನದಲ್ಲೇ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನೊಂದಿಗೆ ನೂತನ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಪೂರ್ವ ದೆಹಲಿಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಗಂಭೀರ್, ಕಾಂಗ್ರೆಸ್ ನ ಅರವಿಂದರ್ ಸಿಂಗ್ ಲವ್ಲಿ ಅವರನ್ನು 3 ಲಕ್ಷದ 91 ಸಾವಿರ ಮತಗಳ ಅಂತರದಿಂದ ಮಣಿಸೋ ಮೂಲಕ ರಾಜಕೀಯದಲ್ಲೂ ಹೊಸ ಇನ್ನಿಂಗ್ಸ್ ಆರಂಭಿಸಿದರು.

Leave a Reply

Your email address will not be published. Required fields are marked *