ಸಮರ್ಪಕ ನೀರು ಸರಬರಾಜು ಮಾಡುವಂತೆ ಹೆಚ್. ವಿಶ್ವನಾಥ್ ರೆಡ್ಡಿ ತಾಕೀತು

ಕೊಪ್ಪಳ : ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್. ವಿಶ್ವನಾಥ್‌ರೆಡ್ಡಿ ಅಧಿಕಾರಿಗಳಿಗೆ ತಾಕೀತು ನೀಡಿದರು.  
ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮಗಳ ಕುಡಿಯುವ ನೀರಿನ ಸರಬರಾಜು ಬಗ್ಗೆ ಗ್ರಾಮೀಣ ಕುಡಿಯುವ ನೀರು ಯೋಜನೆ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸುಮಾರು ಹಳ್ಳಿಗಳಲ್ಲಿ ನೀರಿನ ಸಮಸ್ಯೆ ತುಂಬಾ ಇದೆ. ಇದರಿಂದ ಜನರ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಈ ಕುರಿತು ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಮೂಲ ಸೌಕರ್ಯ ಒದಗಿಸಬೇಕು. ನಾವು ಹಳ್ಳಿಗಳಲ್ಲಿ ದಿನನಿತ್ಯ ಒಡಾಡುವ ಸಂದರ್ಭದಲ್ಲಿ ಜನರು ನಮ್ಮ ಮುಂದೆ ತಮ್ಮ ಸಮಸ್ಯೆ  ತೊಡಗಿಕೊಂಡಾಗ ಜನರೊಂದಿಗೆ ಭರವಸೆ ನೀಡುವುದು ತುಂಬಾ ಕಷ್ಟವಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ. ಜನರ ಸಮಸ್ಯೆಗೆ ಸ್ಪಂದಿಸುವ ಮನೋಭಾವನ್ನು ರೂಡಿಸಿಕೊಳ್ಳಬೇಕು. ಸಮಸ್ಯಾತ್ಮಕ ಗ್ರಾಮಗಳಲ್ಲಿ ಮಾಹಿತಿ ಪಡೆದು  ಸಮಸ್ಯೆಯನ್ನು ಕೂಡಲೇ ಬಗೆಹರಿಸಿ. ಅವಶ್ಯ ಬಿದ್ದರೆ ಅಂತಹ ಸಂದರ್ಭ ಬಂದಲ್ಲಿ ನಾವು ನೀವು ಜೊತೆಗೆ ಹೋಗೋಣ. ನಮ್ಮ ಜನರಿಗೆ ಅನುಕೂಲವಾಗುವ ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ಬಹುಜನ ಕುಡಿಯುವ ನೀರಿನ ಯೋಜನೆ ಬಗ್ಗೆ ಚರ್ಚಿಸಿ ಅಗತ್ಯವಾದಲ್ಲಿ ವ್ಯೆಯಕ್ತಿಕವಾಗಿ ಆ ಭಾಗದ ಸಚಿವರ ಶಾಸಕರ ಜೊತೆಗೆ ಚರ್ಚಿಸಲು ಮುಂದಾಗುತ್ತೆನೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್.ವಿಶ್ವನಾಥ್‌ರೆಡ್ಡಿ ಹೇಳಿದರು.

Leave a Reply

Your email address will not be published. Required fields are marked *