ಸರ್ಕಾರಿ ವೈದ್ಯರಿಗೆ ಸಿಹಿಸುದ್ದಿ ನೀಡಿದ ರಾಜ್ಯಸರ್ಕಾರ

ಬೆಂಗಳೂರು : ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಜಿಲ್ಲಾ ಆಸ್ಪತ್ರೆಗಳಿಂದ ಬರುವ ಆದಾಯದಲ್ಲಿ ಶೇ.30 ರಷ್ಟು ಹಣವನ್ನು ವಿವಿಧ ಬಗೆಯ ಶಸ್ತ್ರ ಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಿದ ವೈದ್ಯರಿಗೆ ಪ್ರೋತ್ಸಾಹ ಧನವನ್ನಾಗಿ ನೀಡಲು ಮುಂದಾಗಿದ್ದು, ಶೀಘ್ರವೇ ಅದನ್ನು ಜಾರಿಗೆ ತರುವುದಾಗಿ ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯಡಿ ತುಮಕೂರು ಜಿಲ್ಲಾಸ್ಪತ್ರೆ ಸುಮಾರು 4 ಕೋಟಿ ರೂ. ಆದಾಯ ಗಳಿಸಿಕೊಂಡಿದೆ. ಈ ರೀತಿಯ ಆದಾಯದಲ್ಲೇ ಶೇ. 30 ರಷ್ಟು ಹಣವನ್ನು ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯ ಸಿಬ್ಬಂದಿಗೆ ಪ್ರೋತ್ಸಾಹಧನವಾಗಿ ನೀಡುವ ಯೋಜನೆಯೊಂದನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *