ಸಾಮಾಜಿಕ ಜಾಲತಾಣಗಳಿಗೂ ಆಧಾರ್ ಕಡ್ಡಾಯ..!

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸುಳ್ಳು ಸುದ್ದಿಗಳು ಹೆಚ್ಚಾಗಿ ಹರಿದಾಡುತ್ತಿದ್ದು, ಇವುಗಳಿಗೆ ಕಡಿವಾಣ ಹಾಕೋಕೆ ಕೇಂದ್ರ ಸರ್ಕಾರ ಮುಂದಾಗಿದೆ. ಸುಳ್ಳು ಸುದ್ದಿ ಹರಡದಂತೆ ತಡೆಗಟ್ಟಲು ಸೋಷಿಯಲ್ ಮೀಡಿಯಾ ಖಾತೆಗಳಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ.

ಟ್ರೋಲ್ ಗಳ ಮೂಲಕ ಸುಳ್ಳು ಸುದ್ದಿಯನ್ನ ಹರಿಬಿಡಲಾಗುತ್ತದೆ. ಅನೇಕ ಸಂದರ್ಭದಲ್ಲಿ ಟ್ರೋಲ್ ಮಾಡುವ ಪೇಜ್ ಗಳು ಯಾರದು ಎನ್ನುವುದು ಗೊತ್ತಾಗುವುದಿಲ್ಲ. ಇದಕ್ಕೆಲ್ಲ ಕಡಿವಾಣ ಹಾಕುವ ಉದ್ದೇಶದಿಂದ ಸೋಷಿಯಲ್ ಮೀಡಿಯಾ ಖಾತೆಗಳಿಗೆ ಆಧಾರ್ ಕಾರ್ಡ್, ಪಾಸ್ ಪೋರ್ಟ್, ಮೊಬೈಲ್ ನಂಬರ್ ನಂತಹ ಅಧಿಕೃತ ಗುರುತಿನ ಚೀಟಿ ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಲಾಗುತ್ತಿದೆ.

Leave a Reply

Your email address will not be published. Required fields are marked *