ವಿಶ್ವಕಪ್ ಸಮರ : ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಟೀಮ್ ಇಂಡಿಯಾ

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಮಹಾಸಮರದಲ್ಲಿ ಇಂದು ಟೀಮ್ ಇಂಡಿಯಾ 3ನೇ ಪಂದ್ಯವನ್ನಾಡುತ್ತಿದ್ದು, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡದ ಸವಾಲನ್ನು ಎದುರಿಸಲಿದೆ. ಆಡಿರುವ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ನ್ಯೂಜಿಲೆಂಡ್ ಗೆಲುವಿನ ಜರ್ನಿ ಮುಂದುವರೆಸಿರುವ ತವಕದಲ್ಲಿದೆ. ಇತ್ತ ಕೊಹ್ಲಿ ಪಡೆಯೂ ತಾನಾಡಿದ ಎರಡು ಪಂದ್ಯಗಳಲ್ಲೂ ಭರ್ಜರಿ ಗೆಲುವು ದಾಖಲಿಸಿದೆ. ಇಂದು ನ್ಯೂಜಿಲೆಂಡ್ ತಂಡವನ್ನು ಮಣಿಸಿ ಹ್ಯಾಟ್ರಿಕ್ ಗೆಲುವು ದಾಖಲಿಸಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇ ಏರುವ ಲೆಕ್ಕಾಚಾರದಲ್ಲಿ. ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಶಿಖರ್ ಧವನ್ ಕೈ ಬೆರಳಿಗೆ ಗಾಯ ಮಾಡಿಕೊಂಡಿದ್ದು, ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯೋದು ಅನುಮಾನವಾಗಿದ್ದು, ಅವರ ಬದಲಿಗೆ ಕೆ.ಎಲ್ ರಾಹುಲ್ ರೋಹಿತ್ ಶರ್ಮಾ ಜೊತೆಗೂಡಿ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *