ವೈಎಸ್ ಆರ್ ಫ್ಯಾನ್ ಗಾಳಿಗೆ ತೂರಿಹೋದ ಚಂದ್ರಬಾಬು ನಾಯ್ಡು

ಅನುಭವಿ ರಾಜಕಾರಣಿ, ಪ್ರಧಾನಿ ಹುದ್ದೆಯ ಮೇಲೂ ಕಣ್ಣಿಟ್ಟಿದ ಆಂಧ್ರ ಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು, ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ವೈಎಸ್ ಆರ್ ಸಿ ಪಕ್ಷದ ಮುಂದೆ ಭಾರೀ ಮುಖಭಂಗ ಅನುಭವಿಸಿದ್ದಾರೆ.

ಮತ್ತೊಮ್ಮೆ ಆಂಧ್ರ ಪ್ರದೇಶದ ಸಿಎಂ ಆಗೋ ಕನಸು ಕಾಣುತ್ತಿದ್ದ ಚಂದ್ರಬಾಬು ನಾಯ್ಡುಗೆ ಆಂಧ್ರದ ಜನರು ತಕ್ಕ ಪಾಠ ಕಲಿಸಿದ್ದಾರೆ. ಈ ಮೂಲಕ ವೈಎಸ್ಆರ್ ಸಿ ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಆಂಧ್ರದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಜಗನ್ ಪಕ್ಷವೂ ಭಾರೀ ಬಹುಮತದೊಂದಿಗೆ ಗೆಲುವು ಸಾಧಿಸೋ ಮೂಲಕ ತಮ್ಮ ಹತ್ತುವರ್ಷದ ಕನಸನ್ನು ನನಸು ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *